HomeIndiaBREAKING NEWS: ಘೋರ ದುರಂತ; ಹೆದ್ದಾರಿಯಲ್ಲಿ ಆಕ್ಸಿಡೆಂಟ್ ನೋಡ್ತಿದ್ದವರ ಮೇಲೆ ಹರಿದ ಕಾರ್: 9 ಜನ...

BREAKING NEWS: ಘೋರ ದುರಂತ; ಹೆದ್ದಾರಿಯಲ್ಲಿ ಆಕ್ಸಿಡೆಂಟ್ ನೋಡ್ತಿದ್ದವರ ಮೇಲೆ ಹರಿದ ಕಾರ್: 9 ಜನ ಸಾವು

ಗುಜರಾತ್ ನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡಿದ್ದಾರೆ

ಅತಿವೇಗದಿಂದ ಬಂದ ಜಾಗ್ವಾರ್ ಕಾರ್ ಜನರ ಮೇಲೆ ನುಗ್ಗಿದೆ. ಕಾರ್ ಡಿಕ್ಕಿ ಹೊಡೆದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಮತ್ತು ಥಾರ್ ನಡುವೆ ಅಪಘಾತ ಸಂಭವಿಸಿದ ನಂತರ ಜನರು ಹೆದ್ದಾರಿಯಲ್ಲಿ ನೋಡುತ್ತಾ ನಿಂತಿದ್ದಾಗ ಈ ಘಟನೆ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಜನ ಜಮಾಯಿಸಿದ್ದರು. ಅಷ್ಟರಲ್ಲಿ ಹಿಂದಿನಿಂದ ಜಾಗ್ವಾರ್ ಕಾರು ಬಂದು ಜನರ ಮೇಲೆ ನುಗ್ಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular