ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಆಸ್ಪತ್ರೆಯಲ್ಲಿ ಬಹಿರಂಗವಾಯ್ತು ಪುಟ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಸತ್ಯ

ಸೂರತ್: ಗುಜರಾತ್ ನ ಸೂರತ್ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ತನ್ನ ನೆರೆಹೊರೆಯ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಥ್ವಾ ಪ್ರದೇಶದ ರುದರ್‌ಪುರ ಪೊಲೀಸ್ ಲೈನ್‌ನಲ್ಲಿ ಈ ಘಟನೆ ನಡೆದಿದೆ.

ಮಾರ್ಚ್ 29 ರಂದು ಮಧ್ಯಾಹ್ನ ಇಬ್ಬರು ಮಕ್ಕಳು ತಮ್ಮ ಮನೆಗಳ ಬಳಿ ಮುಗ್ಧವಾಗಿ ಆಟವಾಡುತ್ತಿದ್ದಾಗ ಪರಿಸ್ಥಿತಿ ಲಾಭ ಪಡೆದು ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ನಂತರ ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಚಪ್ಪಲಿಯಿಂದ ಹೊಡೆದು ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಸಿದ್ದಾನೆ.

ಬೆದರಿಕೆಯಿಂದ ಭಯಭೀತಳಾದ ಬಾಲಕಿ ಆರಂಭದಲ್ಲಿ ಮೌನವಾಗಿದ್ದಳು. ಆದರೆ, ಮರುದಿನ ಆಕೆಯ ಗುಪ್ತಾಂಗದಲ್ಲಿ ತೀವ್ರ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯು ಆಘಾತಕಾರಿ ಸತ್ಯವನ್ನು ಬಹಿರಂಗವಾಗಿದೆ. ಬಾಲಕಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳು ಮತ್ತು ಆಕೆಯ ಜನನಾಂಗದಲ್ಲಿ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮನೆಯವರು ಅವಳನ್ನು ಪ್ರಶ್ನಿಸಿದಾಗ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಬಾಲಕಿಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಯ ಸುರಕ್ಷತೆಯನ್ನು ಖಾತ್ರಿಪಡಿಸಿದ ನಂತರ ಅವರು ಅಥ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿ ಅಪ್ರಾಪ್ತನನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read