ಹುಷಾರಿಲ್ಲ ಎಂದ ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಗರ್ಭಿಣಿ ಎಂಬುದು ದೃಢ; ಬಯಲಾಯ್ತು ಪಕ್ಕದ ಮನೆಯವನ ನೀಚ ಕೃತ್ಯ

ಅಹಮದಾಬಾದ್: ಗುಜರಾತ್‌ ರಾಜಧಾನಿ ಅಹಮದಾಬಾದ್‌ ನಲ್ಲಿ ಅಪ್ರಾಪ್ತೆ ಮೇಲೆ ನೆರೆಮನೆಯ ಯುವಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ಸುಮಾರು ಒಂದು ವರ್ಷದಿಂದ 13 ವರ್ಷದ ಬಾಲಕಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನೆ. ಬುಧವಾರ ಬಾಲಕಿ ಗರ್ಭಿಣಿ ಎಂಬುದು ಗೊತ್ತಾದಾಗ ಇಡೀ ವಿಷಯ ಬಯಲಾಗಿದೆ. 23 ವರ್ಷದ ಆರೋಪಿ ಬಾಲಕಿಯ ನೆರೆಹೊರೆಯಲ್ಲಿ ವಾಸವಾಗಿದ್ದಾನೆ. ಹುಡುಗಿ ಅನಾರೋಗ್ಯದಿಂದ ಬಳಲುತ್ತಿದ್ದಾಗ ಪೋಷಕರು ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಗರ್ಭಿಣಿ ಎಂಬುದು ದೃಢಪಟ್ಟಿದೆ.

ಅತ್ಯಾಚಾರ ಸಂತ್ರಸ್ತೆಯ ಪೋಷಕರು ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿ ದೂರಿನಲ್ಲಿ 23 ವರ್ಷದ ನೆರೆಯವನ ಹೆಸರಿಟ್ಟಿದ್ದಾಳೆ. ದೂರು ಸ್ವೀಕರಿಸಿದ ಪೊಲೀಸರು ತಕ್ಷಣ ಕ್ರಮಕೈಗೊಂಡರು.

ಆರೋಪಿಯನ್ನು ಬಂಧಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಆರೋಪಿಗಳು ಬಾಲಕಿಯನ್ನು ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಸಂತ್ರಸ್ತೆಗೆ ಅಪರಾಧದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read