BREAKING NEWS: ದೋಣಿ ಮುಳುಗಿ ಘೋರ ದುರಂತ: 6 ಮಕ್ಕಳು ಸಾವು

ವಡೋದರ: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ.

ದೋಣಿ ಮಗುಚಿ ಬಿದ್ದ ಪರಿಣಾಮ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಸಿಎಂ ಭೂಪೇಂದ್ರ ಪಟೇಲ್ ಸಂತಾಪ ಸೂಚಿಸಿದ್ದಾರೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ. ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಕರುಣಾಮಯಿ ದೇವರು ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ದೋಣಿಯಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣಾ ಕಾರ್ಯಾಚರಣೆ ಸದ್ಯ ನಡೆಯುತ್ತಿದೆ. ಅಪಘಾತದ ಸಂತ್ರಸ್ತರಿಗೆ ತಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read