ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ; ಕಾರ್ ಗುದ್ದಿದ ರಭಸಕ್ಕೆ 15 ಅಡಿ ದೂರ ಹಾರಿಬಿದ್ದ ಪಾದಚಾರಿ

ವೇಗವಾಗಿ ಚಲಿಸ್ತಿದ್ದ ಕಾರು ಪಾದಚಾರಿಗೆ ಡಿಕ್ಕಿಯಾದ ಪರಿಣಾಮ ಪಾದಚಾರಿ 15 ಅಡಿ ದೂರ ಹಾರಿಬಿದ್ದ ಭಯಾನಕ ಹಿಟ್ ಅಂಡ್ ರನ್ ಅಪಘಾತ ಪ್ರಕರಣ ಗುಜರಾತ್ ನ ಭುಜ್ ನಲ್ಲಿ ನಡೆದಿದೆ.

ಭುಜ್‌ನ ಭರಾಪರ್ ಗ್ರಾಮದಲ್ಲಿ ನಡೆದ ಈ ಅಪಘಾತದಲ್ಲಿ ಪಾದಚಾರಿ ಗಾಯಗೊಂಡಿದ್ದಾರೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅತಿವೇಗದಿಂದ ಬಂದ ಆಲ್ಟೋ ಕಾರು ಅಲ್ಲಾವುದ್ದೀನ್ ಸುಲೈಮಾನ್ ಭಟ್ಟಿ ಎಂದು ಗುರುತಿಸಲಾದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಬಳಿಕ ಪಾದಚಾರಿ 15 ಅಡಿ ದೂರ ಹಾರಿ ಬಿದ್ದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಲಾವುದ್ದೀನ್ ರಸ್ತೆ ಬದಿಯ ಪೆಟ್ರೋಲ್ ಪಂಪ್ ಬಳಿ ನಿಂತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ತಿರುವು ತೆಗೆದುಕೊಳ್ಳುವಾಗ ಸ್ಟೀರಿಂಗ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಗಾಯಾಳು ಅಲ್ಲಾವುದ್ದೀನ್‌ನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಮಂಕುವಾ ಪೊಲೀಸರು ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ್ದಾರೆ.

https://twitter.com/priyathosh6447/status/1645316275319750658?ref_src=twsrc%5Etfw%7Ctwcamp%5Etweetembed%7Ctwterm%5E16453162753197506

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read