ಅಹಮದಾಬಾದ್: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಮೂವರು ಶಂಕಿತ ಉಗ್ರರನ್ನು ಗುಜರಾತ್ ಭಯೋತ್ಪಾದಕ ನಿಗ್ರಹ ದಳ ಬಂಧಿಸಿದೆ.
ಬಂಧಿತ ಶಂಕಿತರು ಉಗ್ರರ ಜೊತೆ ನಿರಂತರ ಸಂಪರ್ಕ ಹೊಂದಿದ್ದರು. ದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಅಲ್ಲದೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿರುವುದು ಪತ್ತೆಯಾಗಿದೆ. ಸದ್ಯ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
