ಅಹಮದಾಬಾದ್: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
ಅಹಮದಾಬಾಅದ್ ನ ಬಗೋದರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಂಪತಿ ಹಾಗೂ ಮೂವರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಪುಲ್ ವಘೇಲ್ (32), ಪತ್ನಿ ಸೋನಲ್ (26) ಮಕ್ಕಳಾದ ಕರಿನಾ (11), ಮಯೂರ್ (8) ಹಾಗೂ ಪ್ರಿನ್ಸಸ್ (5) ಮೃತರು. ವಿಪುಲ್ ಕುಟುಂಬ ಆಟೋ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.