HomeLatest NewsBIG NEWS: ಭೀಕರ ಪ್ರವಾಹಕ್ಕೆ ನದಿಯಲ್ಲಿ ಕೊಚ್ಚಿ ಹೋದ ಕಾರು: ನಾಲ್ವರು ಸಾವು; ಮೂವರು ನಾಪತ್ತೆ

BIG NEWS: ಭೀಕರ ಪ್ರವಾಹಕ್ಕೆ ನದಿಯಲ್ಲಿ ಕೊಚ್ಚಿ ಹೋದ ಕಾರು: ನಾಲ್ವರು ಸಾವು; ಮೂವರು ನಾಪತ್ತೆ

ಗಾಂಧಿನಗರ: ಗುಜರಾತ್ ನ ಬೊಟಾಡ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ 9 ಜನರು ಪ್ರಯಾಣಿಸುತ್ತಿದ್ದ ಇಕೋ ಕಾರು ನದಿಗೆ ಬಿದ್ದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ.

ನಾಪತ್ತೆಯಾದವರಿಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗುಜರಾತ್ ನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಕಳೆದ 48 ಗಂಟೆಗಳಲ್ಲಿ ಮಳೆಸಂಬಂಧಿತ ಅನಾಹುತದಲ್ಲಿ 22 ಜನರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular