HomeLatest NewsBIG NEWS: ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಶಶಿಕಾಂತ್ ಗೆ ಆಸಿಡ್ ದಾಳಿ ಬೆದರಿಕೆ ಪತ್ರ

BIG NEWS: ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಶಶಿಕಾಂತ್ ಗೆ ಆಸಿಡ್ ದಾಳಿ ಬೆದರಿಕೆ ಪತ್ರ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಬೆದರಿಕೆ ಪತ್ರ ರವಾನಿಸಿರುವ ಘಟನೆ ನಡೆದಿದೆ.

2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಕುಲಪತಿಗೆ ಆಸಿಡ್ ದಾಳಿ ಬೆದರಿಕೆಯೊಡ್ಡಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರಲ್ಲಿ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ.

2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ವಿವಿಯ ಸತ್ಯಶೋಧನಾ ಸಮಿತಿಯ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಒಂದು ವೇಳೆ ಮರುಮೌಲ್ಯಮಾಪನದಿಂದಾಗಿ ಅಂಕಗಳು ಕಡಿಮೆಯಾದರೆ ಅಥವಾ ನಾವು ಅನುತ್ತೀರ್ಣರಾದರೆ, ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ಬದುಕುವಂತೆ ಮಾಡುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

ಈ ಅನಾಮಧೇಯ ಪತ್ರದಿಂದ ಆತಂಕಗೊಂಡಿರುವ ಕುಲಪತಿ ಶಶಿಕಾಂತ್ ನ್ಯಾಯಾಲಯದ ಮೊರೆ ಹೋಗಿದ್ದು, ಈಗ ಕೋರ್ಟ್ ನಿರ್ದೇಶನದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ರ ಬಂದಿರುವುದು ಎಲ್ಲಿಂದ? ಆರೋಪಿಗಳು ಯಾರೆಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular