ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಶಂಕರ್ ಬಳಿಕ ಗೂಳಿಹಟ್ಟಿ ಗುಟುರು; ರೆಡ್ಡಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ, ಗೂಳಿಹಟ್ಟಿ ಶೇಖರ್ ನಿನ್ನೆ ರಾತ್ರಿ ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಜೊತೆಗೆ ಗೂಳಿಹಟ್ಟಿ ಶೇಖರ್ ಮಾತುಕತೆ ನಡೆಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

ಇಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಾರನ ಕಣಿವೆ ಗ್ರಾಮದಿಂದ ಗೋಳಿಹಟ್ಟಿ ಶೇಖರ್ ಪ್ರಚಾರ ಆರಂಭಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read