HomeKarnatakaಪಿಸ್ತೂಲ್ ನಲ್ಲಿ ಆಟವಾಡುವಾಗ ಹಾರಿದ ಗುಂಡು, ಬಾಲಕ ಸಾವು

ಪಿಸ್ತೂಲ್ ನಲ್ಲಿ ಆಟವಾಡುವಾಗ ಹಾರಿದ ಗುಂಡು, ಬಾಲಕ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೊಂದೇಮಾದಹಳ್ಳಿಯಲ್ಲಿ ಪಿಸ್ತೂಲ್ ನಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿ 4 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನ ಕಾರ್ಮಿಕರ ಮನೆಯಲ್ಲಿ ಇಟ್ಟಿದ್ದ ಪಿಸ್ತೂಲ್ ತೆಗೆದುಕೊಂಡು ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿದೆ. ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ಪಶ್ಚಿಮ ಬಂಗಾಳದಿಂದ ಬಂದಿದ್ದ ಶಶಾಂಕ್ ಎಂಬುವರ ಮಗ ಅಭಿಜಿತ್ ಮೃತಪಟ್ಟ ಬಾಲಕ.

ಮತ್ತೊಬ್ಬ ಬಾಲಕನೊಂದಿಗೆ ಅಭಿಜಿತ್ ಭಾನುವಾರ ಸಂಜೆ ಆಟವಾಡುತ್ತಿದ್ದ  ವೇಳೆ ಕಾರ್ಮಿಕರ ಮನೆಯಲ್ಲಿದ್ದ ಪಿಸ್ತೂಲ್ ಅನ್ನು ಯಾರಿಗೂ ಗೊತ್ತಾಗದಂತೆ ತೆಗೆದುಕೊಂಡಿದ್ದಾರೆ. ಆಟಿಕೆ ಪಿಸ್ತೂಲ್ ಎಂದುಕೊಂಡು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಚಲುವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular