HomeLatest Newsನಾಗರೀಕರಿಗೆ ಬಂದೂಕು ತರಬೇತಿ ; ಆಸಕ್ತರಿಂದ ಅರ್ಜಿ ಆಹ್ವಾನ

ನಾಗರೀಕರಿಗೆ ಬಂದೂಕು ತರಬೇತಿ ; ಆಸಕ್ತರಿಂದ ಅರ್ಜಿ ಆಹ್ವಾನ

ಧಾರವಾಡ : ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಘಟಕದಿಂದ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ನಾಗರೀಕರು ಪೂರಕ ದಾಖಲಾತಿಗಳೊಂದಿಗೆ ಮೇ 08 ರಿಂದ ಮೇ 15, 2025 ರವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆವರೆಗೆ ಹುಬ್ಬಳ್ಳಿಯ ಗೋಕುಲ ರಸ್ತೆ ಹತ್ತಿರದಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2233503, 9738348421, 9901575707 ಗೆ ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ-ಧಾರವಾಡ ನಗರ ಸಶಸ್ತ್ರ ಮೀಸಲು ಪಡೆಯ ಉಪಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular