ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ: ರಾಯರ ದರ್ಶನ ಪಡೆದ ನಟ ಜಗ್ಗೇಶ್

ರಾಯಚೂರು: ಕಲಿಯುಗದ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧಾನಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾರಾಧನೆ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮಂತ್ರಾಲಯದಲ್ಲಿ ಬೀಡುಬಿಟ್ಟಿದ್ದಾರೆ. ರಾಯರಿಗೆ ವಿಶೇಷ ಪಂಚಾಮೃತ ಅಭಿಷೇಕ, ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪುನೀತರಾಗುತ್ತಿದ್ದಾರೆ.

ಗುರು ರಾಘವೇಂದ್ರ ಸ್ವಾಮಿಗಳು ಬೃಂದಾವನ ಪ್ರವೇಶಿಸಿ 353 ವರ್ಷಗಳು. ಈ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಗುರುರಾಯರ ಆರಾಧಾನ ಮಹೋತ್ಸವ ನಡೆಯುತ್ತಿದ್ದು. ಭಕ್ತ ಸಾಗರವೇ ಮಂತ್ರಾಲಯಕ್ಕೆ ಹರಿದು ಬರುತ್ತಿದೆ. ರಾಯರ ದರ್ಶನ ಪಡೆದು ಪಾವನರಾಗುತ್ತಿದ್ದಾರೆ. ಹಿರಿಯ ನಟ ಜಗ್ಗೇಶ್ ಗುರು ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ.

ರಾಯರ ಮಠದಲ್ಲಿ ಚಿನ್ನ, ರಜತ ರಥ ಮಹೋತ್ಸವ, ವಿಶೇಷ ಪೂಜೆ, ಸೇವೆಗಳು ನಡೆಯಲಿದ್ದು, ಪ್ರತಿ ವರ್ಷದಂತೆ ನಟ ಜಗ್ಗೇಶ್ ಕೂಡ ಈವರ್ಷ ಪಾಲ್ಗೊಂಡಿದ್ದಾರೆ. ರಾಯರ ಆರಾಧನಾ ಮಹೋತ್ಸವದಲ್ಲಿ ರಾಯರ ಕರುಣಾಕ್ಷತೆ ತೀರ್ಥ ಪಡೆದ ಕ್ಷಣವನ್ನು ಸಾಮಾಜಿಕ ಜಾಲತಾಣಗಳಲ್ಲಿ ಜಗ್ಗೇಶ್ ಹಂಚಿಕೊಂಡಿದ್ದಾರೆ. ಗುರುವಿಲ್ಲದೇ ಗೋವಿಂದ ಸಿಗನು ಗುರುಭ್ಯೋನಮ: ಎಂದು ಬರೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read