ಮಿತಿ ಮೀರಿದ ವಾಯುಮಾಲಿನ್ಯ: ಮನೆಯಿಂದಲೇ ಕೆಲಸ ನಿರ್ವಹಿಸಲು ಅಧಿಕೃತ ಆದೇಶ

ಗುರುಗ್ರಾಮ್‌ನಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಚೇರಿಗಳಿಗೆ ಮನೆಯಿಂದ ಕೆಲಸ ಮಾಡುವ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದೆ.

ವಾಯು ಗುಣಮಟ್ಟ ನಿರ್ವಹಣಾ ಆಯೋಗದ(CAQM) ಮಾರ್ಗಸೂಚಿಗಳ ಅನುಸಾರವಾಗಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಮತ್ತು ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ನವೆಂಬರ್ 20ರಿಂದ ಜಾರಿ

ಎಲ್ಲಾ ಖಾಸಗಿ ವಲಯದ ಸಂಸ್ಥೆಗಳು 2024 ರ ನವೆಂಬರ್ 20 ರಿಂದ ಮುಂದಿನ ಸೂಚನೆ ಬರುವವರೆಗೆ ಮನೆಯಿಂದಲೇ ಕೆಲಸ ಮಾಡಲು ಉದ್ಯೋಗಿಗಳಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಅಜಯ್ ಕುಮಾರ್ ಆದೇಶಿಸಿದ್ದಾರೆ.

ಗಾಬರಿಗೊಳಿಸುವ ಮಾಲಿನ್ಯ ಮಟ್ಟ ತಗ್ಗಿಸಲು ಮತ್ತು ಪರಿಣಾಮಕಾರಿ ಅನುಷ್ಠಾನ ಖಚಿತಪಡಿಸಿಕೊಳ್ಳಲು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್(GRAP) ನ ಭಾಗವಾಗಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read