BIG NEWS: ಗುರುಪ್ರಸಾದ್ ಮೃತದೇಹ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಕೆಟ್ಟುನಿಂತ ಆಂಬುಲೆನ್ಸ್

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಂಬುಲೆನ್ಸ್ ಅರ್ಧ ದಾರಿಯಲ್ಲಿಯೇ ಕೈಕೊಟ್ಟ ಘಟನೆ ನಡೆದಿದೆ.

ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ವಿಷಯ ಇಂದು ಬೆಳಿಗ್ಗೆ ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮಾದನಾಯಕನಹಳ್ಳಿಯಿಂದ ಆಂಬುಲೆನ್ಸ್ ಮೂಲಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅರ್ಧದಾರಿಯಲ್ಲಿಯೇ ಕೆಟ್ಟು ನಿಂತಿದೆ. ಆಂಬುಲೆನ್ಸ್ ಗೇರ್ ಕಟ್ ಆಗಿ ಮಾರ್ಗ ಮಧ್ಯೆಯೇ ನಿಂತಿದ್ದು, ಬೇರೆ ಆಂಬುಲೆನ್ಸ್ ಮೂಲಕ ಮೃತದೇಹ ಆಸ್ಪತ್ರೆಗೆ ಸಾಗಿಸಲು ಚಾಲಕ ಯತ್ನ ನಡೆಸಿದ್ದಾರೆ. ಆಂಬುಲೆನ್ಸ್ ನಲ್ಲಿ ಮೃತದೇಹದ ಜೊತೆ ಕುಟುಂಬದವರಾಗಲಿ ಅಥವಾ ಸ್ನೇಹಿತರಾಗಲಿ ಯಾರೂ ಇಲ್ಲ. ಮೃತದೇಹವೊಂದೇ ಆಂಬುಲೆನ್ಸ್ ನಲ್ಲಿ ಸ್ಥಳಾಂತರಿಸಲಾಗುತ್ತಿದ್ದು, ಅನಾಥ ಶವದಂತೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read