HomeKarnatakaಗುಟ್ಕಾ ನಿಷೇಧ ಆದೇಶ ತಕ್ಷಣ ಹಿಂಪಡೆಯಲು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಗುಟ್ಕಾ ನಿಷೇಧ ಆದೇಶ ತಕ್ಷಣ ಹಿಂಪಡೆಯಲು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಗುಟ್ಕಾ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

ಗುಟ್ಕಾ ನಿಷೇಧ ಆದೇಶ ಹೊರಡಿಸಿದ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆ ಗುಟ್ಕಾ ನಿಷೇಧ ಆದೇಶ ವಾಪಸ್ ಪಡೆದ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular