HomeKarnatakaಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ....

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಎತ್ತಂಗಡಿ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನವರಾದ ರಾಜೇಶ್ ಅವರು ಆರ್.ಎಸ್.ಎಸ್. ಪ್ರಚಾರಕರಾಗಿ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

2022ರ ಜುಲೈನಲ್ಲಿ ಅವರನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಮಹತ್ವದ ಹುದ್ದೆಗೆ ಬಂದವರ ಅವಧಿ ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಅವಧಿಗೆ ಮೊದಲೇ ಅವರನ್ನು ಬದಲಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೊದಲೇ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಬಿಜೆಪಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆ ಮಹತ್ವದ್ದಾಗಿದೆ. ಪಕ್ಷ ಮತ್ತು ಆರ್.ಎಸ್.ಎಸ್. ನಡುವೆ ಸಮನ್ವಯ ಸಾಧಿಸುವಲ್ಲಿ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುವವರು ಕಾರ್ಯಪ್ರವೃತ್ತರಾಗಿರುತ್ತಾರೆ. ಇತ್ತೀಚೆಗೆ ನಡೆದ ಪಕ್ಷದಲ್ಲಿನ ಬೆಳವಣಿಗೆ ಹಿನ್ನಲೆಯಲ್ಲಿ ರಾಜೇಶ್ ಅವರನ್ನು ಕೈಬಿಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular