ಬೆಂಗಳೂರು: ಗೋಮಾಳ ಜಮೀನು ಕಬಳಿಸಿದ ಆರೋಪದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ಗೋಮಾಳ ಜಮೀನು ಪತ್ನಿ ಹೆಸರಿಗೆ ಮಾಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಮೇತ ಎನ್.ಆರ್.ರಮೇಶ್ ಶಾಸಕ ಬಾಲಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 126 ಕೋಟಿ ಮೌಲ್ಯದ 26 ಎಕರೆ ಗೋಮಾಳ ಜಮೀನು ಕಬಳಿಕೆ ಮಾಡಲಾಗಿದೆ. ಈ ಪೈಕಿ 8 ಎಕರೆ ಜಮೀನನ್ನು ಪತ್ನಿ ಹೆಸರಿಗೆ ಮಾಡಿಸಿಕೊಂಡಿರುವ ಬಾಲಕೃಷ್ಣ, ಬಳಿಕ ನಕಲಿ ದಾಖಲೆ ಸೃಷ್ಟಿಸಿ ಮೂರನೇ ವ್ಯಕ್ತಿಗೆ ಭೂಮಿ ಮಂಜೂರು ಮಾಡಿಸಿದ್ದಾರೆ. ಬಳಿಕ ತನ್ನ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
2025ರ ಏ.3ರಂದು ಕೆಂಗೇರಿ ಉಪನೋಂದಣಿ ಅಧಿಕಾರಿ ಕಚೇರಿಯಲ್ಲಿ ರಜಿಸ್ಟ್ರೇಷನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಆಪ್ತರ ವಿರುದ್ಧವೂ ದೂರು ನೀಡಿದ್ದು, ಒಟ್ಟು 800 ಕೋಟಿ ಮೌಲ್ಯದ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಆಗಿದೆ ಎಂದು 22 ಜನರ ವಿರುದ್ಧ ದೂರು ನೀಡಿದ್ದಾರೆ.