ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಹೆಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವಪ್ಪ, ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದಿದ್ದಾರೆ. ಸಚಿವರ ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ.
ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಪ್ರಶ್ನಿಸುತ್ತಿದ್ದಂತೆ ಸಚಿವರು, ನೇರವಾಗಿ ಉತ್ತರಿಸದೆ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದರು. ‘ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದರು. ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಲು ಮುಂದಾದ ಮಹದೇವಪ್ಪ, ಬೀದಿ ನಾಯಿಗಳಿಗೆ ಕಡಿವಾಣ ಹಾಕಲು ಹೈಕೋರ್ಟ್ ಸೂಚಿಸಿದೆ. ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕಿದೆ. ರಾಜ್ಯದಲ್ಲಿ ಯಾವುದೇ ನಾಯಕತ್ವದ ಬಲಲಾವಣೆ ಗೊಂದಲಗಳಿಲ್ಲ. ಬಾಅಲವೇ ನಾಯಿಯನ್ನು ಅಲುಗಾಡಿಸಿದರೆ ಹೇಗೆ? ಎಂದು ಹೇಳುವ ಮೂಲಕ ಮತ್ತೆ ನಾಯಿ ವಿಚಾರವನ್ನೇ ಪ್ರಸ್ತಾಪಿಸಿದ್ದಾರೆ.
ಬಳಿಕ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸಬೇಡಿ. ನಾನು ಹೇಳಿದ್ದು ಹೈಕೋರ್ಟ್ ನೀಡಿರುವ ಹೇಳಿಕೆಯನ್ನು ಹೇಳಿದ್ದು ಎಂದು ಸಮಜಾಯಿಷಿ ನೀಡಿದ್ದಾರೆ. ಆದರೆ ಸಚಿವರ ಮಾತುಗಳು ಆಡಳಿತ ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ ಇನ್ನೊಂದೆಡೆ ವಿಪಕ್ಷ ನಾಯಕರಿಗೆ ಚರ್ಚೆಗೆ ಹೊಸ ಅಸ್ತ್ರವಾದಂತಾಗಿದೆ.

