HomeLatest NewsBREAKING NEWS: 'KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು': ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

BREAKING NEWS: ‘KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು’: ಹೊಸ ವಿವಾದ ಸೃಷ್ಟಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಇತ್ತೀಚೆಗೆ ಭಾರಿ ವಿವಾದಕ್ಕೆ ಕಾರಣರಾಗಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಟಿಪ್ಪು ಹೊಗಳುವ ಭರದಲ್ಲಿ ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ ‘ಕೆ.ಆರ್.ಎಸ್ ಡ್ಯಾಂ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು’ ಎಂದು ಹೇಳಿದ್ದಾರೆ.

ಕೆ.ಆರ್.ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಈ ಬಗ್ಗೆ ಕೆ.ಆರ್.ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಸಾಕ್ಷಿ ಇದೆ. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧರ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಮಹದೇವಪ್ಪ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular