HomeKarnatakaBIG NEWS: ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ; ಪರಮೇಶ್ವರ್ ಮನೆಯಲ್ಲಿ ನಡೆದದ್ದು ಓನ್ಲಿ ಮುದ್ದೆ,...

BIG NEWS: ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ; ಪರಮೇಶ್ವರ್ ಮನೆಯಲ್ಲಿ ನಡೆದದ್ದು ಓನ್ಲಿ ಮುದ್ದೆ, ನೋ ಹುದ್ದೆ; ಮತ್ತೊಮ್ಮೆ ಸ್ಪಷ್ಟಪಡಿಸಿದ ಸಚಿವ ಹೆಚ್.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಹೆಚ್.ಸಿ.ಮಹದೇವಪ್ಪ ಈ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ.ಹೆಚ್.ಸಿ.ಮಹದೇವಪ್ಪ, ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿಗಳ ಹುದ್ದೆ ಖಾಲಿ ಇಲ್ಲ. ಈಗಾಗಲೇ ಸಿದ್ದರಾಮಯ್ಯನವರು ಈ ಹುದ್ದೆಯಲ್ಲಿದ್ದಾರೆ. ಈ ಹುದ್ದೆಯ ಬಗ್ಗೆ ಅನಗತ್ಯವಾಗಿ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಪುನರುಚ್ಛರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹ ಸಚಿವ ಪರಮೇಶ್ವರ್ ಅವರ ಮನೆಯಲ್ಲಿ ನಡೆದದ್ದು ಓನ್ಲಿ ಮುದ್ದೆ ಊಟ, ನೋ ಹುದ್ದೆ. ಡಿನ್ನರ್ ಕೂಟಕ್ಕೆ ರಾಜಕೀಯ ವ್ಯಾಖ್ಯಾನ ಮಾಡುವುದು ಸರಿಯಲ್ಲ. ಯಾವುದೇ ಹುದ್ದೆ ವಿಚಾರವಾಗಿಯೂ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular