HomeKarnatakaBIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

BIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವಪ್ಪ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ. ಯಾವ ಬದಲಾಣೆಯೂ ಇಲ್ಲ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಗೆ ಸಿಎಂ ಪಟ್ಟ ಚರ್ಚೆಗೆ ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾರೆ ಬದಲಾವಣೆ ಹೇಗೆ ಸಾಧ್ಯ? ಅವರೇ 5 ವರ್ಷ ಸಿಎಂ ಆಗಿ ಇರ್ತಾರೆ ಎಂದರು. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಸಿಎಂ ಆಗ್ತಾರಾ? ಎಂಬ ಪ್ರಶ್ನೆಗೆ ಅವರನ್ನು ಸಿಎಂ ಮಾಡಲ್ಲ, ಹೇಳಿದವರಿಗೆ ಬುದ್ಧಿ ಇಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular