H.D. ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ‘ಫಾರೂಕ್ ಅಬ್ದುಲ್’ ಭೇಟಿ ಕುರಿತು HDK ಹೇಳಿದ್ದೇನು….?

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (Former PM HD Devegowda) ನಿವಾಸಕ್ಕೆ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ ಭೇಟಿ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೊಂದು ಸೌಹಾರ್ಯಯುತ ಭೇಟಿಯಾಗಿದ್ದು, ಗೌಡರ ಆರೋಗ್ಯ ವಿಚಾರಿಸಲು ಇಲ್ಲಿಗೆ ಬಂದಿದ್ದಾರೆ ಅಷ್ಟೇ ಎಂದರು. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಫಾರೂಕ್ ಅಬ್ದುಲ್ (Former CM Faruk Abdulla) ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಹೆಚ್ಡಿಕೆ ನಾವೇನು ಕಾಂಗ್ರೆಸ್ ಜೊತೆ ಹೋಗೋಕೆ ಆಗುತ್ತಾ? ಈಗ ಕಾಂಗ್ರೆಸ್ನವರು ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಜೊತೆ ನಾವು ಮಾತನಾಡೋಕೆ ಆಗುತ್ತಾ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JD(S) alliance) ವಿಚಾರದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನಿನ್ನೆ ಪ್ರತಿಕ್ರಿಯೆ ನೀಡಿದ್ದರು. ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಜೆಡಿಎಸ್ ಪಕ್ಷ ಹೋರಾಟ ಮಾಡಲಿದೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ ನಮಗಿದೆ. ಸದ್ಯದಲ್ಲೇ ಗ್ರಾ.ಪಂ, ತಾ.ಪಂ. ಹಾಗೂ ಜಿ.ಪಂ. ಚುನಾವನೆ ನಡೆಯಲಿವೆ. ಆ ಚುನಾವಣೆಗಳಿಗೂ ನಾವು ತಯಾರಿ ಮಾಡಬೇಕು ಎಂದು ಹೇಳಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read