ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಈವರೆಗೂ ಪರಿಹಾರ ಘೋಷಣೆ ಮಾಡದಿರುವುದಕ್ಕೆ ಗರಂ ಆಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಅಗತ್ಯ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಬಳಿ ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸಿದ್ದರಾಮಯ್ಯ ಮೊನ್ನೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿದರು. ನಾನೂ ಅವರ ಸರ್ವೆಯನ್ನು ನೋಡಿದೆ. ಸಿಎಂ ವಿರುದ್ಧ ಆರೋಪ ಮಾಡುತ್ತಿಲ್ಲ. ವೈಮಾನಿಕ ಸಮೀಕ್ಷೆ ನಡೆಸಿ ಮೂರು ದಿನಗಳಾಗಿವೆ. ಆರು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ. ೫೦ಕ್ಕೂ ಹೆಚ್ಚು ಜನ ನಾವುವಾರುಗಳು ಸತ್ತುಹೋಗಿವೆ. ರೈತರ ಬೆಳೆ ಸಂಪೂರ್ಣ ನಾಶವಾಗಿವೆ. ಸಚಿವರಾಗಲಿ, ಸಿಎಂ ಆಗಲಿ ಫೀಲ್ಡಿಗೆ ಹೋಗಿ ನೋಡಿಲ್ಲ. ಎಷ್ಟು ಹಾನಿತ್ಯಾಗಿದೆ? ರೈತರು ಯಾವ ರೀತಿ ಸಂಕಷ್ಟದಲ್ಲಿದದರೆ ಎಂಬ ಬಗ್ಗೆ ನೋವಿನಲ್ಲಿರುವವರ ಮನವಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ತಕ್ಷಣ ಈ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.
48 ಗಂಟೆಯೊಳಗೆ ಡಿಸಿಗಳು, ಜಿಲ್ಲಾ ಉಸ್ತುವಾರಿ ಸಚಿವರುಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಲಾಗಿದೆಯೇ? ಎಂಬುದನ್ನು ನೋಡಿ ಮಾತನಾಡಬೇಕು ಎಂದರು.
ಈಗಾಗಲೇ ಪ್ರವಾಹ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಂತೆ, ಅನುದಾನ ಕೊಡಬೇಕು ಎಂದು ಸಚಿವ ಕುಮಾರಸ್ವಾಮಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದದರೆ. ಅಗತ್ಯವಿದ್ದರೆ ನಾನೂ ಮೋದಿ, ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ. ನಾನೇ ದೆಹಲಿಗೆ ಹೋಗಿ ಪರಿಹಾರಕ್ಕಾಗಿ ಪ್ರಧಾನಿ ಬಳಿ ಮನವಿ ಮಾಡುತ್ತೇನೆ ಎಂದು ಹೇಳಿದರು.