HomeKarnatakaBIG NEWS: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಮಹತ್ವದ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

BIG NEWS: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಮಹತ್ವದ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ.

ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆಯಾಗಿದ್ದು ನಿಜ. ಮೋದಿಯವರೇ ಸಂಪರ್ಕ ಮಾಡಿ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಬಳಿ ಪ್ರತಿಪಕ್ಷದ ಪರಿಸ್ಥಿತಿಯನ್ನು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಷ್ಟು ಸೀಟು ಬೇಕು ಎಂದು ನಾವು ಕೇಳೋದಿಲ್ಲ. ಜೆಡಿಎಸ್ ಗೆ ಶಕ್ತಿ ಇಲ್ಲ ಎಂದು ಬಿಜೆಪಿ ಭಾವಿಸಬಾರದು. ನಾನು ಪಕ್ಷ ಉಳಿಸಲು ನಾಯಕರನ್ನು ಸಂಪರ್ಕ ಮಾಡಿದ್ದೇನೆ. ವಿಜಯಪುರ, ರಾಯಚೂರು, ಬೀದರ್ ನಲ್ಲಿ ನಮ್ಮ ಶಕ್ತಿ ಇದೆ. ಬಿಜೆಪಿ ಬೆಂಬಲ ನೀಡಿದರೆ ರಾಜ್ಯದ ಜನರ ಹಿತದೃಷ್ಟಿಯಿಂದ ಒಳಿತಾಗಲಿದೆ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular