HomeKarnatakaBIG NEWS: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಆರೋಪ; ನಾಲ್ವರು ಅಧಿಕಾರಿಗಳು ಸಸ್ಪೆಂಡ್

BIG NEWS: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಆರೋಪ; ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಭೂ ಕಬಳಿಕೆಗೆ ಕೆಲ ಅಧಿಕಾರಿಗಳು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕ ಮಹೇಶ್, ಗ್ರಾಮ ಲೆಕ್ಕಿಗ ಅನಿಲ್ ಕುಮಾರ್, ಎಫ್ ಡಿಎ ವಿಷ್ಣು ಹಾಗೂ ಮುಜರಾಯಿ ಇಲಾಖೆಯ ಹರೀಶ್ ಎಂಬುವವರನ್ನು ಅಮಾನತು ಮಾಡಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಣ್ಣೂರಿನ ಪಡುಕೋಟೆ ಕಾವಲ್ ಸರ್ವೆ ನಂ.53ರಲ್ಲಿ ಜಮೀನು ಕಬಳಿಸಲು ಸಾಗುವಳಿ ಪತ್ರಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular