HomeKarnatakaBIG NEWS: ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಕಾಂಗ್ರೆಸ್ ಸಚಿವರುಗಳಿಗೆ HDK ತಿರುಗೇಟು

BIG NEWS: ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಕಾಂಗ್ರೆಸ್ ಸಚಿವರುಗಳಿಗೆ HDK ತಿರುಗೇಟು

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಕಳಂಕಿತ ಅಧಿಕಾರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿಯೂ ಕೆಲಸ ಮಾಡಿರಲಿಲ್ಲವೆ? ಎಂದು ಕೇಳಿದ್ದ ಕೆಲ ಸಚಿವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎನ್ನುವುದು ಈ ಸರಕಾರದಲ್ಲಿರುವ ಕೆಲವರ ಪ್ರಶ್ನೆ. ನನ್ನ ಸರಕಾರದಲ್ಲಿಯೂ ಈ ಅಧಿಕಾರಿ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ; ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಪ್ರಶ್ನಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಕಿಡಿಕಾರಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular