H.D.Kumaraswamy : ರಾಜ್ಯ ಸರ್ಕಾರದ ವಿರುದ್ಧ ‘YST’ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಜಿಎಸ್ ಟಿ ರೀತಿ ವೈ ಎಸ್ ಟಿ ಸಂಗ್ರಹ ಮಾಡಲಾಗುತ್ತಿದೆ. ಅಧಿಕಾರಿಗಳನ್ನು ವರ್ಗಾವಣೆ ಮಾಡದೇ ವಸೂಲಿ ಮಾಡಲು ಶುರುವಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಸಂಗ್ರಹವಾಗುತ್ತಿದ್ದರೆ, ಇತ್ತ ರಾಜ್ಯ ಸರ್ಕಾರ ವೈ ಎಸ್ ಟಿ ಸಂಗ್ರಹ ಮಾಡುತ್ತಿದೆ. YST-ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್. ಈ ಬಗ್ಗೆ ನಾನು ಮಾಹಿತಿ ಕಲೆ ಹಾಕಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ಮಧ್ಯರಾತ್ರಿ 1 ಗಂಟೆಯವರೆಗೆ ಅಧಿಕಾರಗಳನ್ನು ಕರೆದು ಸಭೆ ನಡೆಸುತ್ತಾರೆ ಎಂದರೆ ಏನರ್ಥ? ಇದೊಂದು ಪಾರದರ್ಶಕ ಸರ್ಕಾರವಲ್ಲ. ವರ್ಗಾವಣೆ ದಂಧೆ ನಡೆದಿದೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಬ್ಬರೇನಾ ಮುಖ್ಯಮಂತ್ರಿ? ಸಿದ್ದರಾಮಯ್ಯ ಒಂದು ಹೇಳುತ್ತಾರೆ, ಸತೀಶ್ ಜಾರಕಿಹೊಳಿ ಒಂದು ಹೇಳ್ತಾರೆ ಎಷ್ಟು ಜನ ಸಿಎಂ ಇದ್ದಾರೆ ಎಂದು ಗುಡುಗಿದರು. ಅಧಿಕಾರಿಗಳನ್ನು ವರ್ಗಾವಣೆ ಮಾಡದೇ ವಸೂಲಿ ಶುರುವಾಗಿದೆ ಎಂದು ಹೆಚ್ಡಿಕೆ ಬಾಂಬ್ ಸಿಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read