BIG NEWS : ಕೇಂದ್ರದಿಂದ ‘GST’ ಸರಳೀಕರಣ : ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ಎಂದ H.D ಕುಮಾರಸ್ವಾಮಿ

ಬೆಂಗಳೂರು : ಕೇಂದ್ರದಿಂದ ಜಿಎಸ್ ಟಿ ಸರಳೀಕರಣ ಮಾಡಿರುವುದು ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ! ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ
@narendramodi ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ #GST ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು #ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ. ಹೊಸ ಸುಧಾರಣೆಯೊಂದಿಗೆ GST ಈಗ ಕೇವಲ ಎರಡು ಸ್ಲ್ಯಾಬ್ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ MSMEಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ. ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read