HomeKarnatakaBIG NEWS: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ: ಸರ್ಕಾರದ...

BIG NEWS: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವಿಚಾರ ಮುಂದಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಮುಂದಿಟ್ಟು ಡ್ರಾಮಾ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ವೈಫಲ್ಯವನ್ನು ಮುಚ್ಚಿಕೊಳ್ಳಲು ನಾಟಕವಾಡುತ್ತಿದೆ. ಕಾಂತರಾಜು ಸಮಿತಿ ರಚನೆ ಮಾಡಿ 10 ವರ್ಷಗಳಾಗಿವೆ. 10 ವರ್ಷಗಳಾದರೂ ಯಾಕೆ ವರದಿಯನ್ನು ಜಾರಿ ಮಾಡಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದೆ. ಮುಡಾ ಹಗರಣ ಡೈವರ್ಟ್ ಮಾಡಲು ಜಾತಿಗಣತಿ ವರದಿ ಮುಂದಿಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿನ ಕಾಂಗ್ರೆಸ್ ನಾಯಕರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಯಾಕಪ್ಪ ಈವರೆಗೂ ಜಾತಿಗಣಿತಿ ವರದಿ ಜಾರಿಮಾಡಿಲ್ಲ? ಎಂದು ಪ್ರಶ್ನಿಸಿದರು. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಈಗ ಜಾತಿಗಣತಿ ವಿಚಾರ ಮುಂದಿಟ್ಟಿದ್ದಾರೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular