BIG NEWS: ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಹಾಸನ: ಚನ್ನಪಟ್ಟಣ ಉಪಚುನಾವಣಾ ಅಖಾಡ ಆದಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಖಚಿತ, ಎನ್ ಡಿಎ ಅಭ್ಯರ್ಥಿ ನಿಖಿಲ್ ಗೆಲುವು ನಿಶ್ಚಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರದಿಂದಲೇ ಕಾಂಗ್ರೆಸ್ ಅವನತಿ ಆರಂಭವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಚನ್ನಪಟ್ಟಣದಿಂದಲೇ ಕಾಂಗ್ರೆಸ್ ಅವನತಿ ಆರಂಭವಾಗಲಿದೆ. ಹಾಸನಾಂಬೆ ದರ್ಶನ ಪಡೆದು ಈ ಮಾತು ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

ನನ್ನ ಮಗನನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನವರು ಕುತಂತ್ರ ನಡೆಸಿದ್ದಾರೆ. ಎರಡು ಬಾರಿ ಸೋತರೇನು ಅದೇ ಚನ್ನಪಟ್ಟಣದ ಕ್ಷೇತ್ರದಿಂದ ನಿಖಿಲ್ ಗೆದ್ದು ಬರಲಿದ್ದಾರೆ. ಕಾಂಗ್ರೆಸ್ ನವರು ಏನೇ ಕುತಂತ್ರ ಮಾಡಿದರೂ ಜನ ನಿಖಿಲ್ ಅವರನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣದಲ್ಲಿ ವಿರೋಧಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಅವರಿಗೆ ಚನ್ನಪಟ್ಟಣ ಕ್ಷೇತ್ರದ ಜನರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read