HomeKarnatakaಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಲು ಷರತ್ತು ಹಾಕಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಲು ಷರತ್ತು ಹಾಕಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ ಎಂದು ಘೋಷಣೆಯಾಗಿದೆ. ಆದರೆ ಪಾದಯಾತ್ರೆ ಬಗ್ಗೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದೂಡಿಕೆಯಾಗಲಿದೆ ಎನ್ನಲಾಗಿತ್ತು. ಆದರೆ ಬಿಜೆಪಿ ನಾಯಕರು ನಿಗದಿಯಂತೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಜೆಡಿಎಸ್ ನಾಯಕರ ಮನವೊಲಿಕೆ ಯತ್ನ ನಡೆಸಿದ್ದಾರೆ.

ಈ ನಡುವೆ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೆಲ ಷರತ್ತು ಹಾಕಿದ್ದಾರೆ. ಪಾದಯಾತ್ರೆ ನಿರ್ಣಯ ಕೈಗೊಳ್ಳುವಾಗ ಜೆಡಿಎಸ್ ಜೊತೆ ಮೊದಲೇ ಚರ್ಚೆ ನಡೆಸಿಲ್ಲ. ಅಲ್ಲದೇ ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆ ಮಾಡುವುದರಿಂದ ಜೆಡಿಎಸ್ ಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಹಾಗಾಗಿ ಪಾದಯಾತ್ರೆಗೆ ಜೆಡಿಎಸ್ ನ ಯಾರೊಬ್ಬರೂ ಪಾಲ್ಗೊಳ್ಳಲ್ಲ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನವೊಲಿಕೆ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ.ಕೆ ಜೊತೆ ಚರ್ಚೆ ನಡೆಸಿದಾಗಲೂ ಇದೇ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಬಿಜೆಪಿ-ಜೆಡಿಎಸ್ ಕೋರ್ ಕಮಿಟಿ ಸಮನ್ವಯ ಸಭೆಯಲ್ಲಿ ಪ್ರೀತಂ ಗೌಡ ಹಾಗೂ ಪಿ.ರಾಜೀವ್ ಹಾಜರಾಗಿದ್ದು, ಈ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರ ಕುಟುಂಬ ನಾಶಮಾಡಲು ಹೊರಟ ಪ್ರೀತಂಗೌಡ ಸಭೆಯಲ್ಲಿ ಕೂರಿಸಿಕೊಂಡು ನನ್ನನ್ನು ಸಭೆಗೆ ಕರೆದಿರುವುದು ಸರಿಯಲ್ಲ. ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular