ಮೈಸೂರು: ಕಾಂಗ್ರೆಸ್ ನಾಯಕರಿಗೆ ನನ್ನನ್ನು ಕಂಡರೆ ಭಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಗೆ ನಿದ್ದೆಗೆಡುವಂತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ನಮ್ಮನ್ನು ಕಂಡರೆ ಭಯ ಎಂದರು.
ಕಾಂಗ್ರೆಸ್ ನಾಯಕರು ಮುಂದೆಯೂ ನಮ್ಮದೇ ಸರ್ಕಾರ ಬರಲಿದೆ ಎನ್ನುತ್ತಿದ್ದಾರೆ. ಮುಂದಿನ ಇಪ್ಪತ್ತು ವರ್ಷವೂ ನಿಮ್ಮದೇ ಸರ್ಕಾರ ಇರಲಿ. ಆದರೆ ಮೊದಲು ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡಿ ಎಂದರು.
ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಹೆಚ್ಚಗೈದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಲಹವನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತವನ್ನು ಜನ ಒಪ್ಪಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಸಂಘರ್ಷವಿದೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದೌರ್ಬಲ್ಯ ತೀರುತ್ತದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ವಿಚಾರವಾಗಿ ಮಾತನಾಡಿದ ಹೆಚ್ ಡಿಕೆ, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷ ಡಿಎಂಕೆಯನ್ನು ಮೇಕೆದಾಟು ಯೋಜನೆಗಾಗಿ ಒಪ್ಪಿಸಲಿ ಎಂದರು. ಕಾಂಗ್ರೆಸ್ ನವರಿಗೆ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಒಪ್ಪಿಸುವ ಶಕ್ತಿ ಇಲ್ಲ, ಧಿಕ್ಕರಿಸುವ ಧೈರ್ಯವೂ ಇಲ್ಲ ಎಂದು ಟೀಕಿಸಿದ್ದಾರೆ.