HomeKarnatakaBIG NEWS: ಡಿಸಿಎಂ ವಿರುದ್ಧ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ

BIG NEWS: ಡಿಸಿಎಂ ವಿರುದ್ಧ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೈಸೂರು ಚಲೋ ಬಿಜೆಪಿ-ಜೆಡಿಎಸ್ ಪಾದಯಾತ್ರೆಯುದ್ದಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ಅಣ್ಣನ ಮಗನ ವಿರುದ್ಧ ಪಿತೂರಿ ನಡೆಸಿದರು ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು. ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಸಾವಿಗೆ ಕಾರಣ ಯಾರು? ಎಂಬುದನ್ನು ಎಲ್ಲರ ಮುಂದೆ ಬಹಿರಂಗ ಪಡಿಸುತ್ತೀರಾ ಡಿ.ಕೆ.ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದ್ದಾರೆ.

ಇನ್ನು ದೇವೇಗೌಡರ ಆಸ್ತಿ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ದೇವೇಗೌಡರು ಮೊದಲ ಬಾರಿ ಶಾಸಕರಾದಾಗ ನೀವು ಹುಟ್ಟಿದ್ದಿರಾ? ಹೆಚ್ ಡಿಡಿ ರಾಜಕೀಯಕ್ಕೆ ಬರುವ ಮುನ್ನ ಡಿಪ್ಲೋಮಾ ಇಂಜಿನಿಯರ್. ನಿಮ್ಮ ತಂದೆ ಕೆಂಪೇಗೌಡರು ಏನಾಗಿದ್ದರು? ಎಂದು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಮ್ಯಾನ್ ಹೋಲ್ ಚೇಂಬರ್ ಕದ್ದು ಹಣ ಸಂಪಾದನೆ ಮಾಡುತ್ತಿದ್ದ. ಜೇಡರಹಳ್ಳಿ ಬಳಿ ಈ ರೀತಿ ಕಳ್ಳತನ ಮಾಡುತ್ತಿದ್ದ ಎಂದು ಗಂಭೀರ ಆರೋಪ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular