HomeKarnatakaನನ್ನನ್ನು ಹೀಗಳೆಯುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದ ಡಿಸಿಎಂ; ಡಿ.ಕೆ.ಶಿವಕುಮಾರ್ ವಿರುದ್ಧ HDK ಕಿಡಿ

ನನ್ನನ್ನು ಹೀಗಳೆಯುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದ ಡಿಸಿಎಂ; ಡಿ.ಕೆ.ಶಿವಕುಮಾರ್ ವಿರುದ್ಧ HDK ಕಿಡಿ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ಮುಂದುವರೆದಿದೆ. ನನ್ನನ್ನು ಹೀಗಳೆಯಲು ಹೋಗಿ ಡಿಸಿಎಂ ನಮ್ಮ ಹೆಮ್ಮೆಯ ಸೇನೆಯನ್ನೇ ಹೀಗಳೆದಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ಸಚಿವರು, ಶಾಸಕರು ಇನ್ನೂ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಿದ್ದರು. ಇದಕ್ಕೆ ಕಿಡಿಕಾರಿದ್ದ ಡಿಸಿಎಂ ಹೆಚ್.ಡಿ.ಕೆ ಕೇವಲ ಭೇಟಿ ಕೊಟ್ಟು ಬಂದ್ರೆ ಸಾಕಾ? ಅವರೊಬ್ಬರೇ ಹೋಗಿ ಏನು ಮಾಡ್ತಾರೆ? ಮಿಲಿಟರಿಯನ್ನೂ ಫೀಲ್ಡ್ ಗೆ ಇಳಿಸಲಿ ಎಂದು ಲೇವಡಿ ಮಾಡಿದ್ದರು.

ಇದೀಗ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನನ್ನನ್ನು ಹೀಗಳೆಯುವ ಬರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಹೆಮ್ಮೆಯ ಸೇನೆಯನ್ನು ಹೀಗಳೆದಿರುವುದು ದುರ್ದೈವದ ಸಂಗತಿ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular