HomeKarnatakaBIG NEWS: ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

BIG NEWS: ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರೂ ಎಸ್ಐಟಿ ಅಧಿಕಾರಿಗಳು ಇನ್ನು ಯಾಕೆ ಕೋರ್ಟ್ ಗೆ ಹಾಜರುಪಡಿಸಿಲ್ಲ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ರೇವಣ್ಣರನ್ನು ಬಂಧಿಸಲಾಗಿದೆ. ಮಹಿಳೆ ಪತ್ತೆ ಮಾಡಿ 5 ದಿನಗಳು ಕಳೆದಿವೆ. ಆದರೂ ಇನ್ನೂ ಯಾಕೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಆಕೆಯನ್ನು ಹಾಜರುಪಡಿಸಿಲ್ಲ? ಆ ಹೆಣ್ಣುಮಗಳ ಹೇಳಿಕೆಯನ್ನು ಯಾಕೆ ದಾಖಲಿಸಿಲ್ಲ ಎಂದು ಕೇಳಿದ್ದಾರೆ.

ರೇವಣ್ಣರನ್ನು ಇನ್ನೂ ಕೆಲದಿನಗಳ ಕಾಲ ಜೈಲಿನಲ್ಲಿಯೇ ಕೂಡಿಹಾಕಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ. ಕಿಡ್ನ್ಯಾಪ್ ಕೇಸ್ ನಲ್ಲಿ ಸತ್ಯಾಂಶ ಹೊರಬರುವುದು ಸರ್ಕಾರಕ್ಕೆ ಬೇಕಿಲ್ಲ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular