BIG NEWS: ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಸರಪಳಿಯನ್ನ ಗಟ್ಟಿಗೊಳಿಸಿ: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ. ಅಧಿಕಾರಕ್ಕೆ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದ್ದಾರೆ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read