HomeKarnatakaBIG NEWS: ಹೆಚ್.ಡಿ.ಕೆ ಭೇಟಿಯಾದ ಸಂಸದೆ ಸುಮಲತಾ ಆಪ್ತ; ಕುತೂಹಲ ಮೂಡಿಸಿದ ಚರ್ಚೆ

BIG NEWS: ಹೆಚ್.ಡಿ.ಕೆ ಭೇಟಿಯಾದ ಸಂಸದೆ ಸುಮಲತಾ ಆಪ್ತ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿ, ವಾಗ್ದಾಳಿ ನಡೆಸುತ್ತಲೇ ಇದ್ದರು. ಇದೀಗ ಸುಮಲತಾ ಆಪ್ತ ಸಚ್ಚಿದಾನಂದ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸುಮಲತಾ ಅಂಬರೀಶ್ ಕೂಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಆಪ್ತ ಕುಮಾರಸ್ವಾಮಿಯವರನ್ನು ಭೇಟಿಯಾಗುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಮಂಡ್ಯ ಲೋಕಸಭಾ ಕ್ಷೇತ್ರ ಒಂದು ವೇಳೆ ಬಿಜೆಪಿಗೆ ಅಥವಾ ಜೆಡಿಎಸ್ ಗೆ ಸಿಕ್ಕಲ್ಲಿ ಸುಮಲತಾ ಅವರ ಮುಂದಿನ ರಾಜಕೀಯ ಭವಿಷ್ಯವೇನು? ಎಂಬ ಬಗ್ಗೆಯೂ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular