HomeKarnatakaBIG NEWS: ಪ್ರಜ್ವಲ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

BIG NEWS: ಪ್ರಜ್ವಲ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಶಿವಮೊಗ್ಗ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಜ್ವಲ್ ಪರ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ವಿರುದ್ಧ ಪಕ್ಷದ ವತಿಯಿಂದಲೂ ಕ್ರಮ ಕೈಗೊಳ್ಳಲಾಗುವುದು. ಎಸ್ ಐಟಿ ತನಿಖೆ ನಡೆಯುತ್ತಿದೆ, ವರದಿ ಬರಲಿ ನೋಡೋಣ ಎಂದು ಹೇಳಿದರು.

ಇನ್ನು ಪೆನ್ ಡ್ರೈವ್ ಗಳು ಹಂಚಿಕೆಯಾಗಿವೆಯಲ್ಲ, ಇದರ ಹಿಂದೆ ಯಾರಿದ್ದಾರೆ? ಪೆನ್ ಡ್ರೈವ್ ಹಂಚಿಕೆ ಹಿಂದೆ ಕೆಲ ಎಕ್ಸ್ ಪರ್ಟ್ ಗಳು ಇದ್ದಾರೆ. ಅವರು ಯಾರು ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular