BIG NEWS: ಕಾಂಗ್ರೆಸ್ ನವರಿಂದ ನಾನು ಪಾಠ ಕಲಿಯಬೇಕಿಲ್ಲ: ನೆಲಮಂಗಲ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ; ಕಿಡಿಕಾರಿದ HDK

ಬೆಂಗಳೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿರುವ ಗಲಭೆ ಪ್ರಕರಣ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂಬುದು ಎದ್ದು ಕಣುತ್ತಿದೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನೆಲಮಂಗಲ ಗಲಭೆ ವಿಚಾರವಾಗಿ ಕುಮಾರಸ್ವಾಮಿ ರಾಜಕೀಯ ಮಾಡುವುದು ಬೇಡ ಎಂದು ಕಾಂಗ್ರೆಸ್ ನಾಯಕರು, ಗೃಹ ಸಚಿವರು ಹೇಳುತ್ತಿದ್ದಾರೆ. ನಾನು ಇವರಿಂದ ಪಾಠ ಕಲಿಯಬೇಕಿಲ್ಲ. ನಾನು ಕೂಡ ಎರಡು ಬಾರಿ ಈ ರಾಜ್ಯದಲ್ಲಿ ಮುಖ್ಯಮಂತ್ರಿಯಾದವನು. ನನ್ನ ಅವಧಿಯಲ್ಲಿ ಇಂತಹ ಯಾವುದೇ ಗಲಭೆ, ಗಲಾಟೆ ಪ್ರಕರಣಗಳು ನಡೆದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗಲಭೆ ಪ್ರಕರಣಗಳು ಹೆಚ್ಚಾಗಿವೆ. ಇದು ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂದು ಕಿಡಿಕಾರಿದರು.

ನೆಲಮಂಗಲದಲ್ಲಿ ಮೊದಲೇ ಕ್ರಮ ಕೈಗೊಂಡಿದ್ದರೆ ಈ ರೀತಿ ಘಟನೆ ಆಗುತ್ತಿತ್ತಾ? ಸರ್ವಜನಾಂಗದ ಶಾಂತಿಯ ತೋಟ ಹೆಸರಲ್ಲಿ ರಾಜಕಾರಣ ಮಾಡುತ್ತಿರುವವರು ಯಾರು? ಪೆಟ್ರೋಲ್ ಬಾಂಬ್ ಎಸೆಯುವ ಕೆಲಸವಾಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಇದೆಲ್ಲವೂ ಸಣ್ಣ ಘಟನೆಯೇ? ಆಕಸ್ಮಿಕವೇ? ಎಂದು ಪ್ರಶ್ನಿಸಿದ್ದಾರೆ.

ಈ ಘಟನೆ ನೋಡಿದರೆ ಗೊತ್ತಾಗುತ್ತದೆ ನೀವು ಯಾವ ರೀತಿ ಆಡಳಿತ ನಡೆಸುತ್ತಿದ್ದೀರಿ ಎಂದು. ನಿಮ್ಮ ಆಡಳಿತ ವೈಫಲ್ಯ ಇಟ್ಟುಕೊಂಡು ನಮಗೆ ಬುದ್ಧಿ ಹೇಳಲು ಬರಬೇಡಿ. ಈಗಾಗಲೇ ಗಲಭೆ ನಡೆಸಿದ ಪ್ರಮುಖ ಆರೋಪಿಗಳು ಪರಾರಿಯಾಗಿರುತ್ತಾರೆ. ಗಲಭೆ ಮಾಡಿದವರನ್ನು ಬಿಟ್ಟು ಬೇರೆ ಯಾರನ್ನೋ ಬಂಧಿಸಲಾಗುತ್ತಿದೆ. ಅದಕ್ಕಾಗಿಯೇ ಮಹಿಳೆಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಲಕ್ಷಾಂತರ, ಕೋಟ್ಯಂತರ ರೂಪಾಯಿ ಸಾಲ ಮಾಡಿ ಅಂಗಡಿ, ಶೋ ರೂಂ ತೆರೆದಿದ್ದಿವು. ಎಲ್ಲವನ್ನೂ ಬೆಂಕಿ ಹಚ್ಚಿ ಹೋಗಿದ್ದಾರೆ ಎಂದು ಮಾಲೀಕರು ಕಣ್ಣೀರಿಡುತ್ತಿದ್ದಾರೆ. ಮುಂದೆ ಅವರ ಗತಿಯೇನು? ಸಾಲ ಹೇಗೆ ತೀರಿಸುತ್ತಾರೆ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read