BIG NEWS: ನಮ್ಮ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿ ಟಿಕೆಟ್ ನೀಡಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಚುನಾವಣೆಗೆ ನಿಲ್ಲಿಸಲು ಅಭ್ಯರ್ಥಿಗಳೂ ಇಲ್ಲದೇ ನಮ್ಮ ಅಭ್ಯರ್ಥಿಯನ್ನು ಹೈಜಾಕ್ ಮಾಡಿ ಟಿಕೆಟ್ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನವರಿಗೆ ಎಂಥಾ ಸ್ಥಿತಿ ಬಂದಿದೆ. ನಮ್ಮ ಅಭ್ಯರ್ಥಿಯನ್ನು ಹೈಜಾಕ್ ಮಾಡಿ ತಾವು ನಿಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಿಂದ ಕುತಂತ್ರ ನಡೆದಿದೆ. ಚನ್ನಪಟ್ಟನದಲ್ಲಿ ನಮ್ಮ ಪಕ್ಷದ ಅಧ್ಯಕ್ಷನಿಗೆ ನೋಟಿಸ್ ನೀಡಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ, ನಿನ್ನೆ ಸಿದ್ದರಾಮಯ್ಯನವರು ಹೆಚ್ ಡಿಕೆ ಅವರದ್ದು ಬರೀ ಅನುಕಂಪ, ಕಣ್ಣೀರ ಅಲೆ ಇದು ಹೆಚ್ಚು ದಿನ ನಡೆಯಲ್ಲ ಎಂದಿದ್ದಾರೆ. ನನಗೆ ಕಣ್ಣೀರು ಬಂದಿದ್ದು, ಇವರ ಆಡಳಿತ ವೈಖರಿ, ದುರಾಡಳಿತ ನೋಡಿ ಹೊರತು ಬೇರೆಯಾವ ಅನುಕಂಪ ಗಿಟ್ಟಿಸಿಕೊಳ್ಳಲು ಅಲ್ಲ. ಬೇಸರವಾಗಿ ಕಣ್ಣೀರು ಬಂದರೆ ಅದಕ್ಕೂ ಅವಕಾಶವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read