BIG NEWS: ಒಂದುವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗದ ಡಿಕೆಶಿಗೆ ಈಗ್ಯಾಕೆ ಮಮತೆ ಬಂದಿದೆ? ಕೇಂದ್ರ ಸಚಿವ HDK ಪ್ರಶ್ನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಕಳೆದ ಒಂದುವರೆ ವರ್ಷದಿಂದ ಚೆನ್ನಪಟ್ಟಣಕ್ಕೆ ಹೋಗಿಲ್ಲ. ಈಗ್ಯಾಕೆ ಚನ್ನಪಟ್ಟಣದ ಬಗ್ಗೆ ವಿಶೇಷ ಮಮತೆ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ಕುಮಾರಸ್ವಾಮಿ, ಈವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ತಡೆದಿದ್ದು ಯಾರು ? ಸಂಸದನಾಗಿ ಡಿ.ಕೆ.ಶಿವಕುಮಾರ್ ಸಹೋದರನ ನೀಡಿದ್ದ ಕೊಡುಗೆಯಾದರೂ ಏನು? ಈಗ ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ಭಾರೀ ಮಮತೆ ಬಂದಿದೆ ಎಂದು ವ್ಯಂಗ್ಯವಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರುಬೇಕಾದರೂ ಅಭ್ಯರ್ಥಿಯಾಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿಯಾರೆಂದು ಕಾಲ ನಿರ್ಧರಿಸುತ್ತದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read