ಅವರ ಅವ್ಯವಹಾರದ ದಾಖಲೆ ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು: ಡಿಸಿಎಂಗೆ HDK ತಿರುಗೇಟು

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅವ್ಯವಹಾರಗಳ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಆ ದಾಖಲೆಗಳನ್ನು ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಅವರ ಗೊಡ್ಡು ಬೆದರಿಕೆಗಳಿಗೆ ನಾನು ಬಗ್ಗಲ್ಲ. ಅವರ ಅವ್ಯವಹಾರಗಳ ಬಗ್ಗೆ ನನ್ನ ಬಳಿ ಇರುವ ದಾಖಲೆಗಳನ್ನು ತೆರೆದರೆ ಸಂಪುಟವನ್ನೇ ಮಾಡಬಹುದು ಎಂದರು.

ತಪ್ಪು ಮಾಡಿ ಪಶ್ಚಾತ್ತಾಪ ಪಡಲ್ಲ ಎಂದು ಭಡ ಮಾತು ಆಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಗೌರವ ಕೊಡುತ್ತಿಲ್ಲ. ಡಿಕೆಶಿ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ ಎಂದರು.

ಉಪಮುಖ್ಯಮಂತ್ರಿಯಾಗಿ ಜನರ ಸಂಕಷ್ಟ, ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡುತ್ತಾ ಕೂತಿದ್ದಾರೆ. ಹುಚ್ಚರಂತೆ ಪದಬಳಕೆ ಮಾಡುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read