BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ HDK

ಬೆಂಗಳೂರು: ಹೆಚ್.ಡಿ.ಕೆ ಅವರದ್ದು 1000 ಎಕರೆ ಭೂಮಿ ಇದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನದು 48 ಎಕರೆ ಮಾತ್ರ ಭೂಮಿಯಿದೆ. ರಾಜಕಾರಣಕ್ಕೂ ಬರುವ ಮೊದಲೇ ನಾನು ಜಮೀನು ಖರೀದಿಸಿದ್ದೆ. ಚಿತ್ರರಂಗದಲ್ಲಿ ನಿರ್ಮಾಪಕ, ಹಂಚಿಕೆದಾರನಾಗಿದ್ದಾಗ ಆಸ್ತಿ ಖರೀದಿಸಿದ್ದೆ ಎಂದು ಹೇಳಿದ್ದಾರೆ.

50 ಟನ್ ಕಲ್ಲಂಗಡಿ ಬೆಳೆದಿದ್ದೇನೆ, ವಿಡಿಯೋ ಮಾಡಿದ್ದೇನೆ. 55 ಲಕ್ಷ ಮೌಲ್ಯದ ಬಾಳೆ ಬೆಳೆ ಬೆಳೆದಿದ್ದೇನೆ. 20 ಟನ್ ಕೊಬ್ಬರಿ ಬೆಳೆದು ಸ್ಟಾಕ್ ಇಟ್ಟಿದ್ದೇನೆ. ನಾನು ಬೆಳೆದ ಬೆಳೆಯ ಎಲ್ಲಾ ವಿಡಿಯೋ ಮಾಡಿದ್ದೇನೆ. ಕಷ್ಟಪಟ್ಟು ದುಡಿದು ಹಣ, ಆಸ್ತಿ ಸಂಪಾದನೆ ಮಾಡಿದ್ದೇನೆ. ನಾನು ಇವರಿಂದ ಕಲಿಯಬೇಕಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read