HomeKarnatakaBIG NEWS: ಇಂದಿನ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ನೀಡಲಿದೆ: ಕುಮಾರಸ್ವಾಮಿ ಮಾರ್ಮಿಕ ಹೇಳಿಕೆ

BIG NEWS: ಇಂದಿನ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ನೀಡಲಿದೆ: ಕುಮಾರಸ್ವಾಮಿ ಮಾರ್ಮಿಕ ಹೇಳಿಕೆ

ಬೆಂಗಳೂರು: ಮುಡಾ ಹಗರಣದ ವಿಚಾರ ಸೇರಿದಂತೆ ಪ್ರತಿಯೊಂದು ವಿಚಾರ ಡೈವರ್ಟ್ ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಎಲ್ಲಾ ವಿಷಯ ಡೈವರ್ಟ್ ಮಾಡಲು ಈ ಸರ್ಕಾರ ಯತ್ನಿಸುತ್ತಿದೆ. ಯಾವ ಭಯ, ಭಕ್ತಿಯೂ ಇಲ್ಲ, ಗೌರವವೂ ಇಲ್ಲ ಎಂದು ಕಿಡಿಕಾರಿದರು.

ಇಂದು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಕಾಲವೇ ಉತ್ತರೇ ನೀಡಲಿದೆ. ಐದು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯನವರೇ ಇರುತ್ತಾರೆ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ. ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ಬಳಿ ಇವರದ್ದು ಏನೂ ನಡೆಯಲ್ಲ. ನನ್ನ ವಿರುದ್ಧ ಎಫ್ಐಆರ್ ಹಾಕಿ ಬೆದರಿಸುವ ತಂತ್ರ ರೂಪಿಸಿದ್ದಾರೆ. ಎಫ್ಐಆರ್ ನಲ್ಲಿ ಏನಿದೆ? ಬೆದರಿಕೆ ಬಿಟ್ಟರೆ? ಎಲ್ಲವನ್ನೂ ಕಾಲವೇ ನಿರ್ಧರಿಸುತ್ತೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular