HDK ಅವಕಾಶವಾದಿ ಎಂದಿದ್ದ ಬಿಜೆಪಿ ಶಾಸಕರು ವಿಪ್ ಉಲ್ಲಂಘಿಸಿ ಕಾಂಗ್ರೆಸ್ ತೆಕ್ಕೆಗೆ ಹೋಗಿದ್ದಾರೆ; ಮಾಜಿ ಸಿಎಂ ವಾಗ್ದಾಳಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸೋಲು ನಮಗೆ ಹೊಸದಲ್ಲ. ಸೋತಾಗ ಕುಗ್ಗಲ್ಲ, ಗೆದ್ದಾಗ ಹಿಗ್ಗುವುದಿಲ್ಲ ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮೆಲ್ಲ ಶಾಸಕರು ನಮ್ಮ ಅಭ್ಯರ್ಥಿಗೆ ಮತಹಾಕಿದ್ದಾರೆ. ಬಿಜೆಪಿಯ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿ ಕಾಂಗ್ರೆಸ್ ಗೆ ವೋಟ್ ಮಾಡಿದ್ದಾರೆ. ಸೋಮಶೇಖರ್ ನಡೆ ನಿರೀಕ್ಷಿತವೇ ಆಗಿದೆ ಎಂದರು.

ನಿನ್ನೆ ಶಾಸಕರಾದ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕರೆದುಕೊಂಡು ಹೋದವರು ಯಾರು ಎಂಬುದೂ ಗೊತ್ತಿದೆ. ಇದು ನಮಗೆ ಸೋಲಲ್ಲ. ಮೈತ್ರಿ ಮೇಲೆ, ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಬೀರಲ್ಲ. ರಾಜಕೀಯದಲ್ಲಿ ಸೋಲು-ಗೆಲುವು ಸಹಜ ಎಂದು ಹೇಳಿದರು.

ಎಸ್.ಟಿ.ಸೋಮಶೇಖರ್ ವೀರಾವೇಶದ ಮಾತುಗಳನ್ನು ಆಡಿದ್ದರು. ಹೆಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದಿದ್ದರು. ಈಗ ಅವರು ವಿಪ್ ಉಲ್ಲಂಘನೆ ಮಾಡಿ ಏನು ಮಾಡಿದ್ರು? ಮತ್ತೆ ಕಾಂಗ್ರೆಸ್ ತೆಕ್ಕೆಗೆ ಹೋಗಿದ್ದಾರೆ. ಅವತ್ತು ಇದೇ ಕಾಂಗ್ರೆಸ್ ನಾಯಕರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದು ವಾಗ್ದಾಳಿ ನಡೆಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read