HomeKarnatakaBIG NEWS: ಸರ್ಕಾರದ ಸ್ವೇಚ್ಛಾಚಾರಕ್ಕೆ ಖಜಾನೆ ಖಾಲಿಯಾಗಿದೆ; ಮಾಜಿ ಸಿಎಂ ಹೆಚ್.ಡಿ.ಕೆ ವಾಗ್ದಾಳಿ

BIG NEWS: ಸರ್ಕಾರದ ಸ್ವೇಚ್ಛಾಚಾರಕ್ಕೆ ಖಜಾನೆ ಖಾಲಿಯಾಗಿದೆ; ಮಾಜಿ ಸಿಎಂ ಹೆಚ್.ಡಿ.ಕೆ ವಾಗ್ದಾಳಿ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಾ ನಮ್ಮ ಹಣ ನಮಗೆ ಕೊಟ್ಟುಬಿಡಿ ಎಂದು ಕೇಳಿದ ರೀತಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಿರ್ಗತಿಕರ ಹಾಗೆ ಬೇಡುವ ಸ್ಥಿತಿ ಒಂದು ರಾಜ್ಯದ ಮುಖ್ಯಮಂತ್ರಿಗಳಿಗೆ ಬರಬಾರದಿತ್ತು ಎಂದು ಛೇಡಿಸಿದ್ದಾರೆ.

ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ. ಸ್ವಂತ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ನಮ್ಮದು ಸಂಪದ್ಬರಿತ ರಾಜ್ಯ. ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಲಾರದು ಎಂದು ಹೇಳಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಸ್ಪಷ್ಟ. ಇವರು ಲೂಟಿ ಮಾಡಿ ಖಜಾನೆ ಖಾಲಿ ಮಾಡಿದ್ದಾರೆ. ಸರ್ಕಾರದ ಸ್ವೇಚ್ಛಾಚಾರದಿಂದಾಗಿ ಹಣವಿಲ್ಲದ ಸ್ಥಿತಿಯಾಗಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular