HomeKarnatakaBIG NEWS: ಗತಿಗೆಟ್ಟ ಸರ್ಕಾರ; ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎಂಬುದಕ್ಕೆ ಇದೇ...

BIG NEWS: ಗತಿಗೆಟ್ಟ ಸರ್ಕಾರ; ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎಂಬುದಕ್ಕೆ ಇದೇ ಸಾಕ್ಷಿ; HDK ಆಕ್ರೋಶ

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದಕ್ಕೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಸರ್ಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಸರ್ಕಾರದ ಆದೇಶದ ಪ್ರತಿಯನ್ನು ಅವರು ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರ್ಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಅವರು ದೂರಿದ್ದಾರೆ.

ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅವರು; ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರ್ಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರ್ಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಕುಮಾರಸ್ವಾಮಿ  ಒತ್ತಾಯ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular