BIG NEWS: ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಪ್ರಕರಣ: ಕೇಂದ್ರ ಸಚಿವ HDK ಕೆಂಡಾಮಂಡಲ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಈ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದ ಘಟನೆ ನಡೆದಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು, ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿರುವ ಬಗ್ಗೆ ಪ್ರಶ್ನಿಸುತ್ತಿದ್ದಂತೆ ಹೆಚ್.ಡಿ.ಕುಮಾರಸ್ವಾಮಿ, ಈ ವಿಚಾರ ನನ್ನ ಬಳಿ ಚರ್ಚಿಸಬೇಡಿ. ಅದರ ಅವಶ್ಯಕತೆ ನನಗಿಲ್ಲ ಎಂದು ಗರಂ ಆಗಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತ್ರ ನನ್ನ ಬಳಿ ಚರ್ಚಿಸಿ. ಅದನ್ನು ಬಿಟ್ಟು ಬೇರೆ ವಿಚಾರದ ಬಗ್ಗೆ ಚರ್ಚೆ ಅಗತ್ಯವಿಲ್ಲ. ಅಂತಹ ಆರೋಪ ಇದ್ದರೆ ಅದಕ್ಕೆ ಕಾನೂನು ಇದೆ ನೋಡಿಕೊಳ್ಳುತ್ತದೆ. ಯಾಕೆ ದೂರುಗಳಾಗಿವೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read