HomeKarnatakaಮಾಶಾಸನಕ್ಕೆ 5 ಕಿ.ಮೀ ತೆವಳಿಕೊಂಡು ಬಂದ ಅಜ್ಜಿ; ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನು ಕಲಕಿದ ದೃಶ್ಯ; ಸರ್ಕಾರಕ್ಕೆ...

ಮಾಶಾಸನಕ್ಕೆ 5 ಕಿ.ಮೀ ತೆವಳಿಕೊಂಡು ಬಂದ ಅಜ್ಜಿ; ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನು ಕಲಕಿದ ದೃಶ್ಯ; ಸರ್ಕಾರಕ್ಕೆ ಕನಿಕರವಿಲ್ಲವೇ? ಎಂದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ….ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವೃದ್ಧೆಯೊಬ್ಬರು ಮಾಶಾಸನಕ್ಕಾಗಿ 5 ಕಿ.ಮೀ ತೆವಳಿಕೊಂಡು ಬಂದಿರುವ ವಿಡಿಯೋ ಹಂಚಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಮರುಗಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2000 ರೂ ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular